ಬೆಳಗಾವಿ – ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ರೇವಪ್ಪಾ ಕಲ್ಲೋಳಿ(35) , ಪತ್ನಿ ರತ್ನಾ ಕಲ್ಲೋಳಿ (30) ಮಗ ¸ ಸಚಿನ್(8) ಮತ್ತು ಅಣ್ಣನ ಮಗ ಕೃಷ್ಣ (8) ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಭಾರೀ ಮಳೆ ಸುರಿದಿದ್ದರಿಂದ ವಿದ್ಯುತ್ ತಂತಿ ತುಂಡಾಗಿ ಹೊಲದಲ್ಲಿ ಬಿದ್ದಿತ್ತು. ಈ ನಾಲ್ವರು ಹೊಲಕ್ಕೆ ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದ ಪರಿಣಾಮ ಈ ಅವಘಡ ಸಂಭವಿಸಿದೆ.

ವಿದ್ಯುತ್ ತಂತಿ ತುಂಡಾಗಿ ಬಿದ್ದ ಮಾಹಿತಿಯನ್ನು ಗ್ರಾಮಸ್ಥರು  ಈ ಮೊದಲೇ ಹೆಸ್ಕಾಂ ಅಧಿಕಾರಿಗಳಿಗೆ ನೀಡಿ ಸರಿಪಡಿಸಲು ಮನವಿ ಮಾಡಿದ್ದರು. ಮನವಿಯನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೋಲೀಸ್ ಹಿರಿಯ ಅಧಿಕಾರಿಗಳು ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪರಿಣಾಮ ಕೆ.ತಿಮ್ಮಾಪುರದಲ್ಲಿ ಸೂತಕದ ಛಾಯೆ ಆವರಿಸಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here