ಪಬ್ಲಿಕ್ ಟಿವಿ ಮತ್ತು ಬಿಟಿವಿ ಚುನಾವಣಾ ಪೂರ್ವ ಸಮೀಕ್ಷೆ: ಕಾಂಗ್ರೆಸ್ ಗೆ ಬಹುಮತ!

0
1159

ನ್ಯೂಸ್ ಕನ್ನಡ ವರದಿ-(20.04.18): ಕರ್ನಾಟಕದಲ್ಲಿ ಮೇ 12ರಂದು ವಿಧಾನಸಭಾ ಚುನಾವಣೆಯು ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ. ಈ ನಡುವೆ ಕನ್ನಡದ ಪ್ರಸಿದ್ಧ ಟಿವಿ ಚಾನೆಲ್ ಗಳಾದ ಬಿಟಿವಿ ಮತ್ತು ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆಯನ್ನು ನಡೆಸಿದ್ದು, ಎರಡೂ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಕರ್ನಾಟಕ ವಿಧಾನಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಬಿಟಿವಿಯ ಸಮೀಕ್ಷೆಯ ಪ್ರಕಾರ, ಒಟ್ಟು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 94-99 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಟಿವಿ ಸಮೀಕ್ಷೆ ಹೇಳಿದೆ. ಬಿಜೆಪಿ 82-87 ಸ್ಥಾನಗಳನ್ನು ಚುನಾವಣೆಯಲ್ಲಿ ಪಡೆದುಕೊಳ್ಳಲಿದೆ. ಮತ್ತು ಜೆಡಿಎಸ್ 39 ರಿಂದ 44 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಇತರರು 2-6 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸರ್ವೆ ಫಲಿತಾಂಶ ಹೇಳಿದೆ.

ಪಬ್ಲಿಕ್ ಟಿವಿ ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದೆ. ಕಾಂಗ್ರೆಸ್ ಗೆ 85-95 ಸ್ಥಾನಗಳು ಬರಲಿವೆ. ಈ ಮೂಲಕ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ 75-85 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದ್ದರೆ, ಜೆಡಿಎಸ್ 40-45 ಸ್ಥಾನಗಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಇತರರು 0-5 ಸ್ಥಾನಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ.

LEAVE A REPLY

Please enter your comment!
Please enter your name here