ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ಅದೇ ರೀತಿ ರಾಜಕೀಯದಲ್ಲಿ ಒಂದು ಮಾತು ಪ್ರಚಲಿತದಲ್ಲಿದೆ ಇಲ್ಲಿ ಯಾರು ಶಾಶ್ವತ ಮಿತ್ರರೂ ಅಲ್ಲ ಯಾರು ಶಾಶ್ವತ ಶತ್ರುಗಳೂ ಅಲ್ಲ. ಕೆಲ ದಿನಗಳ ಹಿಂದಿನವರೆಗೂ ಮೋದಿ ನೇತೃತ್ವದ ಕೇಂದ್ರ ಸರಕಾರದ ಭಾಗವಾಗಿದ್ದ ತೆಲುಗುದೇಶಂ ಪಕ್ಷ ಇದೀಗ ಬಿಜೆಪಿಯೊಂದಿಗೆ ಮುನಿಸಿಕೊಂಡು ಅದರ ವಿರುದ್ಧ ತಿರುಗಿಬಿದ್ದು ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು ಮಾತ್ರವಲ್ಲದೇ ಬಿಜೆಪಿ ವಿರುದ್ಧ ನೇರವಾಗಿ ಹೋರಾಟಕ್ಕೆ ಇಳಿದಿದೆ.
ಈ ಹೋರಾಟದ ಕಿಚ್ಚು ಎಷ್ಟದೆ ಅಂದರೆ ಕರ್ನಾಟಕದಲ್ಲಿ ಯಾವುದೋ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ.ಇ. ಕೃಷ್ಣಮೂರ್ತಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷಕ್ಕೆ ತಪ್ಪಿಯೂ ಮತಹಾಕಬೇಡಿ ಎಂದು ಸಲಹೆ ನೀಡಿದ್ದಾರೆ. ಸೋಮವಾರ ಇಲ್ಲಿನ ವೈಟ್ಫೀಲ್ಡ್ನಲ್ಲಿ ಗೆಳೆಯರೊಬ್ಬರು ಏರ್ಪಡಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಹೀಗಾಗಿ ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಭಾಷಿಕ ಪ್ರಜೆಗಳು ಬಿಜೆಪಿಗೆ ಮತ ನೀಡಬೇಡಿ ಎಂದು ಕರೆನೀಡಿದರು.