ನರೋಡಾ ಹತ್ಯಾಕಾಂಡ ಪ್ರಕರಣ: ನರೇಂದ್ರ ಮೋದಿ ಆಪ್ತೆ ಮಾಯಾ ಕೊಡ್ನಾನಿ ಖುಲಾಸೆ!

0
487

ನ್ಯೂಸ್ ಕನ್ನಡ ವರದಿ-(20.04.18): ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇತ್ತೀಚೆಗೆ ಹಲವಾರು ಪ್ರಮುಖ ಬೆಳವಣಿಗೆಗಳು ಕಂಡು ಬರುತ್ತಿವೆ. ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆ ತಾನೇ ಗಂಭೀರ ಪ್ರಕರಣವಾಗಿದ್ದ ಹೈದರಾಬಾದ್ ಮಕ್ಕಾ ಮಸ್ಜಿದ್ ಸ್ಫೋಟದ ಆರೋಪಿಗಳನ್ನು ಖುಲಾಸೆ ಮಾಡಲಾಗಿತ್ತು. ಆದರೆ ಪ್ರಮುಖ ಸಾಕ್ಷಿಯೇ ನ್ಯಾಯಾಲಯಕ್ಕೆ ಹಾಜರಾಗಿಲ್ಲವೆನ್ನುವುದು ಬೇರೆ ಮಾತು. ಇದಕ್ಕೂ ಮುಂಚೆ ಹಲವಾರು ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕರ್ನಲ್ ಪುರೋಹಿತ್ ಸೇರಿದಂತೆ ಹಲವಾರು ಸಂಘಪರಿವಾರ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿತ್ತು. ಬಾಲಕ ಹಾಫಿಳ್ ಜುನೈದ್ ಖಾನ್ ನನ್ನು ಕೊಂದ ವ್ಯಕ್ತಿಗೂ ಬಿಡುಗಡೆ ಭಾಗ್ಯ ಕರುಣಿಸಲಾಗಿದೆ. ಇದೀಗ ನರೋಡಾ ಹತ್ಯಾಕಾಂಡದ ಪ್ರಮುಖ ಆರೋಪಿ, ನರೇಂದ್ರ ಮೊದಿ ಆಪ್ತೆ ಮಾಯಾ ಕೊಡ್ನಾನಿಯನ್ನು ಖುಲಾಸೆ ಮಾಡಲಾಗಿದೆ.

ಈ ಪ್ರಕರಣದಲ್ಲಿ ಮಾಯಾ ನಿರ್ದೋಷಿ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಬಾಬು ಬಜರಂಗಿ ಅವರ ಜೀವಾವಧಿ ಶಿಕ್ಷೆ(ಸಾಯುವವರೆಗೂ) ಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಉಳಿದ ಏಳು ಅಪರಾಧಿಗಳಿಗೆ 21 ವರ್ಷ ಶಿಕ್ಷೆ ನೀಡಲಾಗಿದೆ. 28 ವರ್ಷ ಶಿಕ್ಷೆ ಪಡೆದಿದ್ದ ಮಾಯಾ ಕೊಡ್ನಾನಿ ಸೇರಿದಂತೆ 29 ಮಂದಿ ಈ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನರೋಡಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಶೇಷ ನ್ಯಾಯಾಲಯ ಮುಂದೆ ಮಾಯಾ ಕೊಡ್ನಾನಿ ಪರ ಸಾಕ್ಷಿ ಹೇಳಿದ್ದಕ್ಕೆ ಬೆಲೆ ಸಿಕ್ಕಿದೆ. ಘಟನೆ ನಡೆದ ಸಂದರ್ಭ(ಫೆಬ್ರವರಿ 28, 2002)ದಲ್ಲಿ ಮಾಯಾ ಅವರು ಗುಜರಾತಿನ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿದ್ದರು ಎಂದು ಸೆಷನ್ಸ್ ಕೋರ್ಟಿನಲ್ಲಿ ಹೇಳಿದ್ದಾರೆ.

ನರೋಡಾ ಹತ್ಯಾಕಾಂಡ ದುರ್ಘಟನೆಯಲ್ಲಿ 11 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು. ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.

LEAVE A REPLY

Please enter your comment!
Please enter your name here