ಉತ್ತರಪ್ರದೇಶ: ಚಿಕಿತ್ಸೆ ನೀಡಲಾಗುವುದಿಲ್ಲವೆಂದ ಸರ್ಕಾರಿ ಆಸ್ಪತ್ರೆ ವೈದ್ಯರು: ಬಾಲಕ ಮೃತ್ಯು!

0
581

444ನ್ಯೂಸ್ ಕನ್ನಡ ವರದಿ-(20.04.18): ಉತ್ತರಪ್ರದೇಶ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಉನ್ನಾವೋ ಅತ್ಯಾಚಾರ ಪ್ರಕರಣದ ಬಳಿಕ ಸುಮಾರು 10ರಷ್ಟು ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮಕ್ಕಳು ಮೃತಪಟ್ಟ ಪ್ರಕರಣವು ಮಾಸುವ ಮೊದಲೇ ಇದೀಗ ಸರಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿದ ಕಾರಣ ಬಾಲಕನೊಬ್ಬ ಮೃತಪಟ್ಟ ಘಟನೆಯು ಉತ್ತರಪ್ರದೇಶದ ಬಂದಾ ಜಿಲ್ಲೆಯ ಸರಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ವೈದ್ಯರಿಗೆ ನೀಡಲು ತಮ್ಮ ಬಳಿ ಹಣವಿಲ್ಲದ ಕಾರಣ ಮಗನಿಗೆ ಚಿಕಿತ್ಸೆ ನಿರಾಕರಿಸಲಾಯಿತು ಎಂದು ಮೃತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ. ನನ್ನ ಬಳಿ ಹಣವಿಲ್ಲದ ಕಾರಣ ವೈದ್ಯರು ನನ್ನ ಮಗನಿಗೆ ಚಿಕಿತ್ಸೆ ನೀಡಲಿಲ್ಲ. ಅವರು ಹಣಕ್ಕಾಗಿ ನನ್ನನ್ನು ಪದೇ ಪದೇ ಒತ್ತಾಯಿಸಿದ್ದರು’ ಎಂದಿದ್ದಾರೆ. ಬಾಲಕನ ಶವವನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕೊಂಡೊಯ್ದಿರುವ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here